ಸುಮಾರು ಹತ್ತು ತಿಂಗಳು ಹಿಂದಿನ ಮಾತು . ಅಣ್ಣ ಕೊಟ್ಟ ಐಪೋಡನ್ನು ಕಿವಿಗೆ ಸಿಕ್ಕಿಸಿಕೊಂಡು ದೊಡ್ಡ ವೋಲ್ಯುಂ ನಲ್ಲಿ ಹಾಡು ಕೇಳುತ್ತಾ ಆಫೀಸಿಗೆ ತೆರಳುವುದು ನನ್ನ ಅಭ್ಯಾಸ . ಒಂದು ದಿನ ಎಡ ಕಿವಿಯ ಇಯರ್ ಪೋನ್ ನಲ್ಲಿ ಕಡಿಮೆ ಬಲ ಕಿವಿಯಲ್ಲಿ ಹೆಚ್ಚು ವೋಲ್ಯುಂ ಕೇಳಿಸತೊಡಗಿದಾಗ 4000/- ನ ಐಪೋಡ ನ ಮೇಲೆ ಎಳ್ಳಷ್ಟು ಸಂಶಯಪಡದೆ ನನ್ನ ಒಂದು ಕಿವಿ ಸ್ವಲ್ಪ ಡಮಾರ್ ಆಗಿದೆ ಎಂದು ಚಿಂತಿಸುತ್ತಿದ್ದೆ . ಹೇಳಿದರೆ ಕೆಪ್ಪ ಎನ್ನುತ್ತಾರೆ ಎಂದು ಹೆದರಿ ಯಾರಲ್ಲೂ ಹೇಳಿರಲಿಲ್ಲ . ಆಮೇಲೆ ಒಂದು ದಿನ ಅದರಲ್ಲಿ ಹಾಡು ಕೇಳಿದ ನನ್ನ ರೂಂ ಮೇಟ್ ಸುಮಂತ್ .. ಇದರ ಎಡ ಇಯರ್ ಫೋನ್ ಹಾಳಾಗಿದೆ ಅಂದಾಗ ನಾನು ಪಟ್ಟ ಸಂಭ್ರಮ ಅಷ್ಟಿಷ್ಟಲ್ಲ .ನನ್ನ ಕರ್ಣದ್ವಯಗಳು ಸರಿಯಾಗಿವೆ ಎಂದು ಬೀಗುತ್ತಿದ್ದೆ . ಆದರೆ ಯಾವತ್ತೂ ಗೋಡೆಗೂ ಕಿವಿ ಇರುತ್ತೆ ಎಂದು ತುಂಬಾ ಜಾಗ್ರತೆಯಿಂದ ಇರುತ್ತಿದ್ದ ನನಗೆ ನನ್ನ ಅಕ್ಕಪಕ್ಕ ಎರಡು ಇರುವುದು ಮರೆತೇ ಹೋಗಿತ್ತು . ನಾನು ಹೆಮ್ಮೆ ಪಟ್ಟುಕೊಂಡಿದ್ದು ಅದಕ್ಕೆ ಕೇಳಿಸಿತೋ ಏನೋ. ಈಗೀಗ ಸ್ವಲ್ಪ ನಖರಾ ಮಾಡತೊಡಗಿದೆ. ಸುಮಾರು 15 ದಿನ ಹಿಂದಿನಿಂದ ಈ ಕಿವಿ ನೋವಿ ಶುರು ಆಗಿದೆ. ಮೊದಲಿಗೆ ಇದು ಮಾಮೂಲಿ ಶೀತ ಎಂದುಕೊಂಡು ನಮ್ಮ "ಮಾತ್ರೆ ರಾಜನ " ಬಳಿ ಹೋದೆ .ಮಾತ್ರೆರಾಜ ಹೆಸರು ಯಾಕೆ ಎಂದು ಕೇಳಿದಿರಾ ?? ಏನಿಲ್ಲ ನೀವು ಅವರ clinic ನ ಒಳಗೆ ಹೋಗಿ ಹೊರಬರುವಷ್ಟರಲ್ಲಿ ನಿಮ್ಮ ತೂಕ 1/2kg ಮಾತ್ರೆಗಳಿಂದ ಹೆಚ್ಚಾಗಿರುತ್ತದೆ . ಕಂದು, ಬ...
ಇದರಲ್ಲಿ ಬರೆದ ಲೇಖನಗಳಲ್ಲಿ ಕೆಲವು ನನ್ನ ಕಲ್ಪನೆಯ ಕೂಸಾದರೆ ಕೆಲವು ಅನುಭವದ ಬರಹಗಳು . ಒಟ್ಟಿನಲ್ಲಿ ಪ್ರತಿ ಲೇಖನದ ಕೊನೆಯಲ್ಲಿ ಓದುಗರ ತುಟಿಯಂಚಿನಲ್ಲಿ ಸ್ವಲ್ಪ ಮುಗುಳ್ನಗೆ ಉಳಿದದ್ದೇ ಹೌದಾದರೆ ನನ್ನ ಪ್ರಯತ್ನ ಸಾರ್ಥಕ . ಅದೇ ನನಗೆ ಸಲ್ಲುವ ಪ್ರಶಸ್ತಿ. ========================ವಿಕಟಕವಿ ==================