Skip to main content

ದಿಬ್ಬಣ


ಕೇಳಿದಳು ಕನಸಿನಲಿ ಕತ್ರಿನಾ ಕೈಫು
ಆಗಲೇ ಸುಮಂತಾ ನಾ ನಿನ್ನ ವೈಫು
ಹೇಳಿದೆನು ನೀನೊಂದು ಕೆಲಸವನು ಮಾಡು
ಮನೆ ಮುಂದೆ ನಿಂತಿರುವ ಕ್ಯೂವನ್ನು ನೊಡು||

ಸೈಫ ಅಲಿ ಖಾನಲ್ಲಿ ಇಲ್ಲವೊ ದಮ್ಮು
ನನ್ನವನಾಗೋ ಓ  ನನ್ನ ಸುಮ್ಮು!!!!
ಬೇಡುತ್ತ ನಿಂತಿಹಳು ನೋಡು ಕರೀನಾ
ಬಕರಾ ಆಗಲು ನಾನೇನು ಕುರಿ ನಾ ??

ಬಹುಕಾಲದಿಂದ ನಾ ಮೆಚ್ಚಿಹೆನು ನಿನ್ನ
ತಪ್ಪು ಮಾಡಿದೆ ವರಿಸಿ ಸಣ್ಣ ’ಬಚ್ಚಾ’ನನ್ನ ( SMALL  ' B' )
ಓಡಿ ಬರುವೆ ನಾ ಹಿಡಿದು ನಿನ್ನ ಕೈ
ತುದಿಗಾಲ ಮೇಲಿಹಳು ಐಶ್ವರ್ಯ ರೈ||

ನಮ್ಮೂರ ಗಂಡಿವನು ನನಗೆ ಪ್ರಿಫರೆನ್ಸು
ಕ್ವೀನು ನಾನು ನೀನೇ ನನ್ನ ಪ್ರಿನ್ಸು
ಇಲ್ಲ ಅಂದರೆ ನಿನಗೆ ನನ್ನ ಮೇಲಾಣೆ
ಹಕ್ಕು ಚಲಾಯಿಸುತ್ತಿಹಳು ಪಡುಕೋಣೆ||

ಸೌತ್  ಇಂಡಿಯನ್ನರದ್ದು ಸಪರೇಟು ಸಾಲು
ನಾನೇ ಬೇಕೆಂದು ಎಲ್ಲರದು ಗೋಳು
ಒಲ್ಲೆನೆಂದರೆ ನಾನು  ಕುಡಿಯುವೆನು ವಿಷ
ಎಂದು ಬೆದರಿಸುತ್ತಿದ್ದಾಳೆ ತ್ರಿಷಾ

ಜಾನ್ ಹೈ ತು ಎನ್ನುತ್ತಾಳೆ  ಜೆನಿಲಿಯಾ
ಛತ್ರ 'ಪತಿ' ಯಾಗೋ ಎಂದೆನುವ ಶ್ರೀಯಾ
ನನ್ನೊಳಗೆ ನೀನು ನಿನ್ನೊಳಗೆ ನಾನು
ಲಲ್ಲೆಗರೆಯುತ್ತಿರುವಳು ಆಸೀನು||

ಬಿಪಾಷಾ ಮಲ್ಲಿಕಾರನ್ನು ಮಾಡಿದೆ ಅವೈಡು
ರಾಖೀ ಸಾವಂತು ಡಿಸ್ ಕ್ವಾಲಿಫೈಡು
ಬೋಲ್ಡು ಮಾಡಲು ಎಸೆದಿಹಳು ಬಾಲನ್ನು ವಿದ್ಯಾ
ಪ್ರಿಯಾಂಕ ಬರೆದು ಕಳಿಸಿರುವಳು ಪ್ರೇಮ ಪದ್ಯ ||

ಓದಿ ಕವನವ ಶಾಂತಿಗೆ ನೆತ್ತಿಗೇರಿತು ಪಿತ್ತ
ಹುಡುಕಿದಳು ಸೌಟು-ಲಟ್ಟಣಿಗೆ-ಬೆತ್ತ
ಭಯದಿಂದ  ನಾ ಮಂಚದಿಂದಡಿಗೆ ಬಿದ್ದೆ
ಕನಸು ಮುರಿದು ನಾ ನಿದ್ದೆಯಿಂದೆದ್ದೆ !!!

============================ವಿಕಟಕವಿ ==================================


 

Comments

Anonymous said…
ಅದ್ಭುತ ಸಾರ್! ನಿಮ್ಮ ಕವನ ಓದಿ ನಾ ನಕ್ಕಿದ್ದಲ್ಲದೇ, ನನ್ನ ಕವನಗಳೆಲ್ಲಾ ಪೀಚು ಪೀಚಾಗಿ ಕಂಡವು, ಇದೊಂದು ಕವನ ದ ಮುಂದೆ...

ಇದು ಈಗಿನ ಕಾಲದ "ಬಾರೇ ರಾಜಕುಮಾರಿ..ಹೋಗೋಣ ಜಂಬೂ ಸವಾರಿ" !
ಸಾರ್
ನಿಮ್ಮ ಪ್ರತಿಕ್ರಿಯೆ ಓದಿ ಅಟ್ಟ ಏರಿ ಕುಳಿತೆ .
ತುಂಬಾ ಧನ್ಯವಾದಗಳು

ಸುಮಂತ್
Parisarapremi said…
sakkath!! clap clap clap... :-)
Thanks Sindhu thanks Arun

sumanth
ಎಲೋ ವಿಕಟಕವಿ. ನಿನಗೆ ಈ ಹಿರೊಇನ್ ಗಳು ಬೇಡವಾದಲ್ಲಿ, ನನ್ನ ಅಡ್ರ‍ೆಸ್ ಕೊಡ್ತಿನಿ ಕಳಿಸಿಕೊಡು. ಮಧುಸೂದನ ನಾಯಕ್.
PARAANJAPE K.N. said…
ಚೆನ್ನಾಗಿದೆ
Anonymous said…
ಮಧುಸೂದನ್ ರ ಆಫರ್ ಚೆನಾಗಿದೆ ನೋಡಿ ಸಾರ್...;-)
sunaath said…
ಸುಮಂತ,
ಕವನ ಓದಿ ಭಾಳಾ ಖುಶಿ ಆಯ್ತು.
Pavan K said…
Hahaha....ultimate sir.
-Pavan

Popular posts from this blog

ಎರಡರ ಸ್ವಗತ

  ಇದೊಂದು ಅನಾದಿ ಕಾಲದಿಂದ ನಡೆದು ಬಂದ  ದೌರ್ಜನ್ಯ,ದಬ್ಬಾಳಿಕೆ,ಶೋಷಣೆಯ ಕಥೆ.ಕರುಣೆಯಿಲ್ಲದ ಈ ಸಮಾಜವು ಒಂದು ಪ್ರತಿಭೆಯನ್ನು ಹೇಗೆ ತನ್ನ ಕಪಿಮುಷ್ಠಿಯಲ್ಲಿ ಅದುಮಿ ಹಿಡಿದಿಟ್ಟುಕೊಳ್ಳಬಹುದು ಎಂಬುದಕ್ಕೆ ಜ್ವಲಂತ ಉದಾಹರಣೆ.   ನಾನು "ಎರಡು".ಒಂದು ಒಂದು ಸೇರಿ ಎರಡಾದ್ದರಿಂದ ನನ್ನನ್ನು ಏಕಾತ್ಮಜ ಎಂದೂ ಕರೆಯಬಹುದು.ವಸ್ತುಶಃ ನನ್ನಲ್ಲಿ ಯಾವ ಲೋಪದೋಷಗಳಿಲ್ಲದೆ ಹೋದರೂ ವಿನಾಕಾರಣ ನನ್ನನ್ನು ಹೀನಾಯವಾಗಿ ನೋಡಲಾಗುತ್ತದೆ.ಅಷ್ಟೇ ಅಲ್ಲದೆ ಸ್ವತಂತ್ರವಾಗಿ ಗೌರವಾನ್ವಿತರಾಗಿರುವ ಯಾರಾದರೂ ನನ್ನೊಡನೆ ಸಂಬಂಧ ಬೆಳೆಸಿಕೊಂಡರೆ ಅವರ ಗೌರವಕ್ಕೂ ಕಪ್ಪು ಮಸಿ ಬಳಿಯಲಾಗುತ್ತದೆ.   ಈಗ ನೀವೇ ನೋಡಿ  ಒಂದೇ  ಮಾತಿನಲ್ಲಿ ಹೇಳುವುದಾದರೆ,ಅಂಕೆ ಸಂಖ್ಯೆಗಳಲ್ಲಿ ೧ ಯಾವತ್ತೂ ರಾಜ.ಮೊದಲಿಗ,ಯಾರಿಂದಲೂ ಪೂರ್ಣವಾಗಿ ಭಾಗಿಸಲ್ಪಡದ ಆದರೆ  ಎಲ್ಲ ಸಂಖ್ಯೆಗಳನ್ನೂ ಭಾಗಿಸಬಲ್ಲ ತಾಕತ್ತು ಇದಕ್ಕಿದೆ.ಆದರೆ ಅರಸನ ಮುಂದಿರಬೇಡ,ಕತ್ತೆಯ ಹಿಂದಿರಬೇಡ ಎಂಬ ನಾಣ್ಣುಡಿಗೆ ವ್ಯತಿರಿಕ್ತವೆಂಬಂತೆ ನಾನು ಈ ರಾಜ ೧ ರ ಮುಂದೆ ,ಆ ಥರ್ಡ್ ಕ್ಲಾಸ್ ೩ ರ ಹಿಂದೆ ಕೂತಿದ್ದೇನೆ.ಈ ಜನ್ಮ ಕುಂಡಲಿಯ ದೋಷದಿಂದಲೇ ನಾನು ಯಾರ ಅಕ್ಕಪಕ್ಕ ಹೋಗಿ ಕೂತರೂ ಅವರ ವಾಸ್ತುಶಾಸ್ತ್ರ ಅಲ್ಲೋಲಕಲ್ಲೋಲವಾಗುತ್ತದೆ.  ಸಾಮಾಜಿಕ ಜೀವನದಲ್ಲೂ ಮೊದಲನೇ ಮದುವೆಗಿದ್ದಷ್ಟು ಮರ್ಯಾದೆ ಎರಡನೇಯದಕ್ಕಿಲ್ಲ.ಎದುರಿಗೆ ಎಲ್ಲರೂ ಸಂತೋಷದಿಂದಿದ್ದರೂ ಒಳಗೊಳಗೇ   ಕುಹಕವಾಡುತ್ತಾರೆ.ಅದೇ ಮದುವೆ ಮಂಟಪದಲ್ಲಿ ಯಾರಾದ್ರೂ

ಚಾಯ್ ಗರಮ್!!!!!!!!!!!!!!

ಬೆಳಿಗ್ಗೆ ಎದ್ದ ತಕ್ಷಣ 80 % ಜನರು ಕುಡಿಯುವ ಚಹಾ-ಕಾಪಿಯ ಪುರಾಣ ಯಾರಿಗಾದರೂ ಗೊತ್ತಾ? ಅಷ್ಟಾದಶ ಪುರಾಣಗಳಲ್ಲಿ 19ನೇ ಪುರಾಣವಾದ ತಲೆಹರಟೆ ಪುರಾಣದಲ್ಲಿ ಪೇಯಪರ್ವದ 420 ನೇ ಶ್ಲೋಕದಲ್ಲಿ ಚಹಾದ ಉಲ್ಲೇಖವಿದೆ. "ನಭಯಂ ಚಾಸ್ತಿ ಜಾಗೃತಃ " ಅಂದರೆ ಚಾ ಕುಡಿದವನಿಗೆ ಯಾವ ಭಯವೂ ಇಲ್ಲ ಅವನು ಸದಾ ಜಾಗೃತನಾಗಿರುತ್ತಾನೆ ಎಂದು ಹೇಳಲಾಗಿದೆ .ಅದರ ಸಂಕ್ಷಿಪ್ತ ವಿವರಣೆಯನ್ನು ಇಲ್ಲಿ ಕೊಟ್ಟಿದ್ದೇನೆ ವನವಾಸ - ರಾವಣ ಸಂಹಾರ - ಪಟ್ಟಾಭಿಷೇಕ ಎಲ್ಲ ಆದ ನಂತರ ರಾಮ ಒಮ್ಮೆ ಹೀಗೆ Evening Walk ಗೋಸ್ಕರ ದಂಡಕಾರಣ್ಯದಲ್ಲಿ ಸಂಚರಿಸುತ್ತಿದ್ದಾಗ ಯಾವುದೋ ಒಂದು ಬೇರಿನ ಆರ್ತನಾದ ಅವನಿಗೆ ಕೇಳಿಸಿತು . ಈಗ ಬೇರುಗಳು ಎಲ್ಲಿ ಅಳುತ್ತವೆ ?? ಎಂಬ ಲಾಜಿಕಲ್ ಪ್ರಶ್ನೆ ಕೇಳಬೇಡಿ . ಸೀತೆಯನ್ನು ರಾವಣ ಅಪಹರಿಸಿಕೊಂಡು ಹೋದಾಗ ರಾಮ "ಓ ತರು ಲತೆಗಳೇ ಓ ಪಶುಪಕ್ಷಿಗಳೇ ..... ಕಂಡಿರಾ ನನ್ನ ಸೀತೆಯನ್ನು .??? .........ಎಂದು ಕೇಳುತ್ತ ಹೋಗುತ್ತಾನಂತೆ . ಅಂದರೆ ಆ ಕಾಲದಲ್ಲಿ ಅವುಗಳಿಗೆ ಮಾತನಾಡುವ ಶಕ್ತಿ ಇತ್ತು . ಗೊತ್ತಾಯ್ತಾ ?? ಆ ಆರ್ಥಸ್ವರ ಕೇಳಿದ ರಾಮ ಅದರ ಬಳಿ ಬಂದು ಏನಾಯಿತು ?? ಎಂದು ಕೇಳಿದಾಗ ಆ ಬೇರು ಹೀಗೆ ಉತ್ತರಿಸಿತು . ನೋಡು ರಾಮ ನಿನ್ನ ತಮ್ಮ ಲಕ್ಷ್ಮಣ ಮೂರ್ಛೆ ತಪ್ಪಿ ಬಿದ್ದಾಗ ಹನುಮಂತ ತಂದ ಸಂಜೀವಿನಿ ಸೊಪ್ಪು ನಾನು . ನನ್ನನ್ನು ಹಿಂಡಿ ರಸ ತೆಗೆದು ಲಕ್ಷ್ಮಣನನ್ನು ಬದುಕಿಸಿ ಕೆಲಸ ಮುಗಿದ ಮೇಲೆ ಹೀಗೆ ಮರದ ಕೆಳಗೆ ಬಿಸುಟು

ಪಟ್ ಪಟ್ ಪಟಾಕಿ !!!

1)ಶರ್ಟಿಗೆ ಎರಡು ಮೀಟರ್ ಬಟ್ಟೆ ಯಾಕ್ರಿ ?? ಪಕ್ಕದ ಓಣಿ ಟೈಲರ್ ಒಂದೂವರೆ ಮೀಟರ್ ಸಾಕು ಎಂದ !!! ಎಂದು ಟೈಲರ್ ನನ್ನು ದಬಾಯಿಸಿದಾಗ ಅವರು ಹೇಳಿದ್ದು ಸರಿ ಆದರೆ ಅವರ ಮಗ ಎರಡನೇ ಕ್ಲಾಸ್ ನನ್ನ ಮಗ ಎಂಟನೆ ಕ್ಲಾಸ್ ಎಂದು ಟೈಲರ್ ಶಾಂತವಾಗಿ ಉತ್ತರಿಸಿದನು. 2)ನಿನಗೋಸ್ಕರ ಚಂದ್ರ - ತಾರೆ - ಚುಕ್ಕೆಗಳನ್ನು ಹೆಕ್ಕಿ ತರಲೇ?? ಎಂದ ಪ್ರಿಯತಮನಿಗೆ "ಅದೆಲ್ಲಾ ಬೇಡಾ  ಮಾರಾಯ ಬಾಯಾರಿಕೆ ಆತಿತ್ತ ಒಂದ್ ಬೊಂಡ (ಎಳನೀರು) ತೆಗೆದುಕೊಡು" ಎಂದಾಗ ಅವನು  "ಮರ ಸುಮಾರು ದೊಡ್ದುಂಟು ಮಾರಾಯ್ತಿ !!!!" ಎಂದು ತಬ್ಬಿಬ್ಬಾದನು. 3)ಸರಸದಲ್ಲಿರಲು ಏನೋ ತಮಾಷೆಗೆ  ನಾನು  "You are so Sweet" ಎಂದು ಹೇಳಿದ್ದನ್ನೇ ನನ್ನ ಶಾಂತಿ ಸೀರಿಯಸ್ಸಾಗಿ ತೆಗೆದುಕೊಂಡು ತಾನು ಕುಳಿತ ಜಾಗದ ಸುತ್ತ ಡಿಡಿಟಿಯ ರಂಗೋಲಿ ಹಾಕಿಕೊಂಡಳು. 4)ಕನ್ನಡದಿಂದ - ಚೈನೀಸ್ ಅನುವಾದ ಭಾಷೆಯ ಪುಸ್ತಕದಿಂದ ಉರು ಹೊಡೆದು ಬೀಜಿಂಗ್ ನ ತರಕಾರಿ ಮಾರುಕಟ್ಟೆಗೆ ಹೋಗಿ "ಸ್ಯಾನ್ ವೊಕ್ಯೊಸ್ಜ್  2kg" ಎಂದು ಕೇಳಿದೊಡನೆ "ಏಯ್ ಮಾಣಿ ಎರ್ಡ್ ಕೇಜೀ ಗುಂಬ್ಳಕಾಯಿ ತೆಕಬಾರಾ " ಎಂದು ಅಂಗಡಿಯ ಮಾಲಿಕನಾದ ಕುಂದಾಪುರದ ಶೀನಣ್ಣ ಬೊಬ್ಬೆ ಹೊಡೆದನು. 5)ಯಕ್ಷಗಾನ ದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾಗ ಅಭ್ಯಾಸಬಲದಿಂದ "ದುಷ್ಟಾ.. ನಿನ್ನ ಎರಡೂ ಕೈಗಳನ್ನು CUT ಮಾಡಿಬಿಡುತ್ತೇನೆ ಎಂದು ಅಬ್ಬರಿಸಿದ ಪಾತ್ರಧಾರಿಗೆ ತಾನು ಆಂಗ್ಲ ಭಾಷಾಪ್ರಯೋಗ