ರೀ.......... ನಿಮ್ಮ ಬಟ್ಟೆ ಇಸ್ತ್ರೀ ಮಾಡಿ ಅಲ್ಲಿ ಇಟ್ಟಿದ್ದೀನಿ. ಹ್ಮ್ ಸರಿ ಎಂದೆನು. ಎನ್ರೀ ಎರಡೇ ಇಡ್ಲಿ ತಿಂದಿದ್ದೀರಾ. ನಾನು ಕಾಫಿ ಮಾಡಿ ತರೋದ್ರೊಳಗೆ ಎದ್ ಬಿಟ್ರಿ ಇನ್ನೊಂದೆರಡು ಹಾಕಿಸ್ಕೊಳ್ಳೋದಲ್ವಾ ?? ಹಸಿವಿಲ್ಲ ಬಿಡೇ... ರೀ... ಶೂ ಪಾಲಿಷ್ ಮಾಡಿ ಇಟ್ಟಿದ್ದೀನಿ. ಲಂಚ್ ಬಾಕ್ಸ್ ಕೂಡಾ ಅಲ್ಲೇ ಇಟ್ಟಿದ್ದೀನಿ ನನ್ನವಳು ಉಲಿದಳು..... ಒಂದು ನಿಮಿಷ...... ಎಲ್ಲೋ ಏನೋ ಒಂದು ಲಿಂಕ್ ತಪ್ಪಿ ಹೊಗ್ತಾ ಇದೆ ಅನ್ನಿಸ್ತು. ಒಂದು ಎರಡು ಗಂಟೆ ಫ್ಲಾಶ್ ಬ್ಯಾಕ್ ಹೋದೆನು. ಅಮ್ಮೋ ................ ಪ್ರತಿದಿನ ಸೂರ್ಯನ ಬಿಸಿಲು ಮುಖಕ್ಕೆ ಹೊಡೆಯುವವರೆಗೂ ಮುಖ ಹೊರಳಿಸಿ ಮಲಗಿ ದಿಂಬು ಬೆಚ್ಚಗಾದ ಮೇಲೆ ಮುಖ ಅರಳಿಸುವ ನನ್ನ ಸೂರ್ಯಕಾಂತಿ ಶಾಂತಿ ಇಂದು ಅಲಾರ್ಮ್ ಬಾರಿಸೋ ಮೊದಲೇ ಎದ್ದು ಚಹಾ ಮಾಡಿ ನನ್ನನ್ನೆಬ್ಬಿಸಿ ಸ್ನಾನಕ್ಕೆ ನೀರಿಟ್ಟು ಇಡ್ಲಿ-ಚಟ್ನಿ ರೆಡಿ ಮಾಡಿ ಬಟ್ಟೆಗೆ ಇಸ್ತ್ರೀ ಹಾಕಿಟ್ಟು ಶೂ ಪಾಲಿಷ್ ಮಾಡಿ....................... ಈ ದಿನ ಏನೋ ದೊಡ್ಡ ಹಗಲು ದರೋಡೆ ಆಗುವುದು ಖಂಡಿತ ಎಂದು ಅರಿವಾಯಿತು.ಭಯವಾಯಿತು ಮನಸ್ಸಿಗೆ.ಆದರೂ ತೋರ್ಪಡಿಸದೇ ಕೇಳದವನಂತೆ ಸುಮ್ಮನಿದ್ದೆ. ಆದರೂ ನನ್ನ ಶಾಂತಿ ಬಿಡಬೇಕಲ್ಲ. ರೀssssssssss......... ಮತ್ತೊಮ್ಮೆ ನೋಡು ಆಫೀಸಿಗೆ ಟೈಮ್ ಆಯಿತು ತೆಂಕಣ ಸುತ್ತಿ ಮೈಲಾರಕ್ಕೆ ಬರಬೇಡ. ಸೀದಾ ವಿಷಯಕ್ಕೆ ಬಾ ಎಂದೆನು. ಮೊನ್ನೆ ಪೇಪರ್ ಓದಿದ್ರಾ ?? ಶಾರುಖ್ ಖಾನ್ ಅವ್ನ ಹ...
ಇದರಲ್ಲಿ ಬರೆದ ಲೇಖನಗಳಲ್ಲಿ ಕೆಲವು ನನ್ನ ಕಲ್ಪನೆಯ ಕೂಸಾದರೆ ಕೆಲವು ಅನುಭವದ ಬರಹಗಳು . ಒಟ್ಟಿನಲ್ಲಿ ಪ್ರತಿ ಲೇಖನದ ಕೊನೆಯಲ್ಲಿ ಓದುಗರ ತುಟಿಯಂಚಿನಲ್ಲಿ ಸ್ವಲ್ಪ ಮುಗುಳ್ನಗೆ ಉಳಿದದ್ದೇ ಹೌದಾದರೆ ನನ್ನ ಪ್ರಯತ್ನ ಸಾರ್ಥಕ . ಅದೇ ನನಗೆ ಸಲ್ಲುವ ಪ್ರಶಸ್ತಿ. ========================ವಿಕಟಕವಿ ==================