Skip to main content

Posts

Showing posts from May, 2010

WELCOME TO KUNDAPUR !!!!!! .

********************************************************************************* ಕೋಟೇಶ್ವರ ಕುಂಭಕಾಶಿ ಕೋಟ ಕೋಡಿ ಕೋಣಿ ನಮ್ಮ ಊರು ಕುಂದಾಪ್ರ ಎಷ್ಟು ಚಂದ ಕಾಣಿ ಹೊಯ್ಕ ಬರ್ಕ್ ಭಾಷೆ ಕೇಂಡ್ರೆ ಕಿಮಿಗೆಷ್ಟ ಖುಶಿ ಅರ್ಥ ಆಗದಿದ್ರೆ ಮಾಡ್ಕಬೇಡಿ ಮಂಡೆಬಿಶಿ || ಹೋಯ್ ಹೇಂಗಿದ್ರಿ ಮಾರ್ರೆ ??? ಬನಿ ಕೂಕಣಿ ..... ಉಂಡ್ರಿಯಾ ?? ಒಂದೈದ್ನಿಮಿಷ ಅಡ್ಡ ಒರಗಿ ... ದಣು ಹೊಯ್ಲಿ   ಆಮೇಲೆ ನಾನ ಚೊರೆ ಮಾಡುಕ್ಕೆ ಶುರು ಮಾಡ್ತೆ ಅಕಾ ?? ಅಲ್ದೆ ಕುಂದಾಪುರದ್ ವಿಷಯ ಬರುದ್ ಅಂದ್ರೆ ಸಾನ್ ಸುಮಾರಾ   ?? ಎಂತಿಲ್ಲ ಅಂದ್ರೂ ಒಂದೆರಡ್ ಒಪ್ಪತ್ತಾರೂ ಬೇಕಾ ಬೇಡ್ದಾ ?? ಕಾಣಿ ..... ಆ ಬೋರ್ಡ್ ಸಮಾ ಕಾಣಿ ಖುಶಿ ಆತ್ತಾ ಇಲ್ದಾ ?? " ನಮ್ಮೂರೇ ನಮಗೆ ಸವಿಬೆಲ್ಲ " ಅಂದ ಹಾಂಗೆ ಯಾರಿಗೇ ಆಯ್ಲಿ ಅವರ ಊರಿನ ಬೋರ್ಡ್ , ಊರಿಗೆ ಹೋಪು ಬಸ್ಸ ಕಂಡ್ರೆ   ಅಷ್ಟೆಲ್ಲ ಎಂತಕ್ಕೆ ದೊಡ್ಡ ದರೋಡೆ ಆಯಿತ್ತ ಅಂತ ಹೇಳಿ ಉದಯ ವಾರ್ತೆಯಲ್ಲಿ ನಮ್ಮೂರಿನ ಒಂದ್ ಓಣಿ ತೋರ್ಸಿದ್ರೂ ಆ ಬೇಜಾರಿನ್ ಮಧ್ಯಾನೂ ಸ್ವಲ್ಪ ಖುಷಿ ಆಯಿಯೇ ಆತ್ತ . ಊರಲ್ಲಿಪ್ಪತ್ತಿಗೆ ಮೇಳಿ ತಿರ್ಸಿ ಕಾಣ್ದಿರೂ ಬೇರೆ ಊರಿಗೆ ಹೋದಾಗಳಿಕೆ ನಮ್ಮೂರಿನ ಜನ್ರನ್ನ ಕಂಡ್ರೆ ಒಂದ್ ಥರಾ ಮನ್ಸಿಗೆ ಸಮಾಧಾನ . " ನಮ್ ಜನ " ಎಂಬ ಪ್ರೀತಿ ಬಳ್ಕಂಡ ಬ...