ಎಮ್ಮೆ ನಿನಗೆ ಸಾಟಿಯಿಲ್ಲ ಒಲೆ ಮತ್ತು ಎಲ್ ಪಿ ಜಿ ಸಿಲಿಂಡರ್ ಮಾತ್ರ ಇಲ್ಲ . ಹೌದು ಇನ್ನೊಮ್ಮೆ ಎಲ್ಲ ಪರೀಕ್ಷಿಸಿದೆ .. ಅವೆರಡೇ .... ನಮ್ಮ ಅಡುಗೆಮನೆಯಲ್ಲಿರುವ ಇನ್ನೆಲ್ಲಾ ಪಾತ್ರೆ ಪರಿಕರಗಳೆಲ್ಲವೂ ಅಲ್ಲಿ ಮೌಜೂದಾಗಿದ್ದವು . ಗೆಳೆಯನ ಮದುವೆಗೆಂದು ಮುಂಬೈಯಿಂದ ಬೆಂಗಳೂರಿಗೆ ಬರುವ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ UPPER BERTH ಸೀಟಿನಲ್ಲಿ ಒಂದು ಸಣ್ಣ ನಿದ್ರೆ ಮುಗಿಸಿ ಕೆಳಗೆ ಇಣುಕಿದ ನನಗೆ ದಿಗ್ಬ್ರಮೆ ಕಾದಿತ್ತು . ಒಂದು ಕ್ಷಣ ನನ್ನನ್ನು ಯಾರೊ ಕಿಡ್ನ್ಯಾಪ್ ಮಾಡಿ ಒಂದು ಅಡುಗೆ ಮನೆಯಲ್ಲಿ ಕೂಡಿ ಹಾಕಿದ್ದಾರೆ ಎಂದುಕೊಂಡೆ . ಆಮೇಲೆ ತಿಳಿಯಿತು LOWER BERTH ನಲ್ಲಿದ್ದ ಒಂದು ತುಂಬು ಕುಟುಂಬವು ಮಧ್ಯಾಹ್ನದ ಭೋಜನದ ತಯಾರಿ ನಡೆಸಿದ್ದರು . ರೈಲಿನಲ್ಲಿದ್ದೇವೆಂದು USE AND THROW ಪ್ಲೇಟ್ ಅಥವಾ ಪ್ಲಾಸ್ಟಿಕ್ಕಿನ ಲೋಟಗಳು ಹುಡುಕಿದರೂ ಸಿಗುತ್ತಿರಲಿಲ್ಲ ಎಲಾ ಥಳಥಳ ಹೊಳೆಯುವ ಸ್ಟೀಲಿನ ಬಟ್ಟಲು ಮತ್ತು ಲೋಟಗಳು . ಅತ್ತಿತ್ತ ಓಡಾಡುತ್ತಿದ್ದವರು ಇದೇ ರೈಲಿನ PANTRY ಎಂದುಕೊಂಡಿರಬೇಕು . ನಾವು ಮನೆಯಲ್ಲಿದ್ದರೂ ಉಪ್ಪು ಖಾರ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಇನ್ಯಾರು ಎದ್ದು ಹೋಗಿ ತರುತ್ತಾರೆಂದು ಆಲಸ್ಯದಿಂದ ತೆಪ್ಪಗೆ ಊಟ ಮಾಡುತ್ತೇವೆ . ಆದರೆ ಇವರೋ ಚಲಿಸುವ ರೈಲಿನಲ್ಲಿದ್ದರೂ ರುಚಿಯೊಂದಿಗೆ ಯಾವುದೇ ಸಂಧಾನ - ರಾಜಿ ಮಾಡಿಕೊಳ್ಳದೇ...
ಇದರಲ್ಲಿ ಬರೆದ ಲೇಖನಗಳಲ್ಲಿ ಕೆಲವು ನನ್ನ ಕಲ್ಪನೆಯ ಕೂಸಾದರೆ ಕೆಲವು ಅನುಭವದ ಬರಹಗಳು . ಒಟ್ಟಿನಲ್ಲಿ ಪ್ರತಿ ಲೇಖನದ ಕೊನೆಯಲ್ಲಿ ಓದುಗರ ತುಟಿಯಂಚಿನಲ್ಲಿ ಸ್ವಲ್ಪ ಮುಗುಳ್ನಗೆ ಉಳಿದದ್ದೇ ಹೌದಾದರೆ ನನ್ನ ಪ್ರಯತ್ನ ಸಾರ್ಥಕ . ಅದೇ ನನಗೆ ಸಲ್ಲುವ ಪ್ರಶಸ್ತಿ. ========================ವಿಕಟಕವಿ ==================