ಇದೊಂದು ಅನಾದಿ ಕಾಲದಿಂದ ನಡೆದು ಬಂದ ದೌರ್ಜನ್ಯ,ದಬ್ಬಾಳಿಕೆ,ಶೋಷಣೆಯ ಕಥೆ.ಕರುಣೆಯಿಲ್ಲದ ಈ ಸಮಾಜವು ಒಂದು ಪ್ರತಿಭೆಯನ್ನು ಹೇಗೆ ತನ್ನ ಕಪಿಮುಷ್ಠಿಯಲ್ಲಿ ಅದುಮಿ ಹಿಡಿದಿಟ್ಟುಕೊಳ್ಳಬಹುದು ಎಂಬುದಕ್ಕೆ ಜ್ವಲಂತ ಉದಾಹರಣೆ. ನಾನು "ಎರಡು".ಒಂದು ಒಂದು ಸೇರಿ ಎರಡಾದ್ದರಿಂದ ನನ್ನನ್ನು ಏಕಾತ್ಮಜ ಎಂದೂ ಕರೆಯಬಹುದು.ವಸ್ತುಶಃ ನನ್ನಲ್ಲಿ ಯಾವ ಲೋಪದೋಷಗಳಿಲ್ಲದೆ ಹೋದರೂ ವಿನಾಕಾರಣ ನನ್ನನ್ನು ಹೀನಾಯವಾಗಿ ನೋಡಲಾಗುತ್ತದೆ.ಅಷ್ಟೇ ಅಲ್ಲದೆ ಸ್ವತಂತ್ರವಾಗಿ ಗೌರವಾನ್ವಿತರಾಗಿರುವ ಯಾರಾದರೂ ನನ್ನೊಡನೆ ಸಂಬಂಧ ಬೆಳೆಸಿಕೊಂಡರೆ ಅವರ ಗೌರವಕ್ಕೂ ಕಪ್ಪು ಮಸಿ ಬಳಿಯಲಾಗುತ್ತದೆ. ಈಗ ನೀವೇ ನೋಡಿ ಒಂದೇ ಮಾತಿನಲ್ಲಿ ಹೇಳುವುದಾದರೆ,ಅಂಕೆ ಸಂಖ್ಯೆಗಳಲ್ಲಿ ೧ ಯಾವತ್ತೂ ರಾಜ.ಮೊದಲಿಗ,ಯಾರಿಂದಲೂ ಪೂರ್ಣವಾಗಿ ಭಾಗಿಸಲ್ಪಡದ ಆದರೆ ಎಲ್ಲ ಸಂಖ್ಯೆಗಳನ್ನೂ ಭಾಗಿಸಬಲ್ಲ ತಾಕತ್ತು ಇದಕ್ಕಿದೆ.ಆದರೆ ಅರಸನ ಮುಂದಿರಬೇಡ,ಕತ್ತೆಯ ಹಿಂದಿರಬೇಡ ಎಂಬ ನಾಣ್ಣುಡಿಗೆ ವ್ಯತಿರಿಕ್ತವೆಂಬಂತೆ ನಾನು ಈ ರಾಜ ೧ ರ ಮುಂದೆ ,ಆ ಥರ್ಡ್ ಕ್ಲಾಸ್ ೩ ರ ಹಿಂದೆ ಕೂತಿದ್ದೇನೆ.ಈ ಜನ್ಮ ಕುಂಡಲಿಯ ದೋಷದಿಂದಲೇ ನಾನು ಯಾರ ಅಕ್ಕಪಕ್ಕ ಹೋಗಿ ಕೂತರೂ ಅವರ ವಾಸ್ತುಶಾಸ್ತ್ರ ಅಲ್ಲೋಲಕಲ್ಲೋಲವಾಗುತ್ತದೆ. ಸಾಮಾಜಿಕ ಜೀವನದಲ್ಲೂ ಮೊದಲನೇ ಮದುವೆಗಿದ್ದಷ್ಟು ಮರ್ಯಾದೆ ಎರಡನೇಯದಕ್ಕಿಲ್ಲ.ಎದುರಿಗೆ ಎಲ್ಲರೂ ಸಂತೋಷದಿಂದಿದ್ದರೂ ಒಳಗೊಳಗೇ ಕುಹಕ...
ಇದರಲ್ಲಿ ಬರೆದ ಲೇಖನಗಳಲ್ಲಿ ಕೆಲವು ನನ್ನ ಕಲ್ಪನೆಯ ಕೂಸಾದರೆ ಕೆಲವು ಅನುಭವದ ಬರಹಗಳು . ಒಟ್ಟಿನಲ್ಲಿ ಪ್ರತಿ ಲೇಖನದ ಕೊನೆಯಲ್ಲಿ ಓದುಗರ ತುಟಿಯಂಚಿನಲ್ಲಿ ಸ್ವಲ್ಪ ಮುಗುಳ್ನಗೆ ಉಳಿದದ್ದೇ ಹೌದಾದರೆ ನನ್ನ ಪ್ರಯತ್ನ ಸಾರ್ಥಕ . ಅದೇ ನನಗೆ ಸಲ್ಲುವ ಪ್ರಶಸ್ತಿ. ========================ವಿಕಟಕವಿ ==================